ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ ; ಆರೋಪಿ ಚೇತನ್ ಗೌಡ ಮಂಗಳೂರಿನಲ್ಲಿ ಸೆರೆ

0
71

ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಚೇತನ್ ಗೌಡನನ್ನು ಪೊಲೀಸರು ಮಂಗಳೂರು ನಗರದಲ್ಲಿ ಬಂಧಿಸಿದ್ದಾರೆ.

ಬಂಧನಕ್ಕೂ ಮುನ್ನ ಆರೋಪಿ ವಿಷ ಸೇವಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ, ಆತನನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಆರೋಪಿಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಹತ್ಯೆಯ ಹಿನ್ನೆಲೆ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.