ಜಿಲ್ಲೆಯ ಗೃಹಬಳಕೆ ಗ್ರಾಹಕರಿಗೆ ಅನಿಲ ವಿತರಣೆಯಲ್ಲಿ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಿ – ಸಂಸದ ಕೋಟಾ ಶ್ರೀನಿವಾಸ ಪೂಜಾರಿ

0
18

ಉಡುಪಿ : ಜಿಲ್ಲೆಯ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿ ಜಿ ಸಿಲಿಂಡರ್ ಗಳ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಲಿಂಡರ್ ವಿತರಣಾ ಸಂಸ್ಥೆಯವರಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಬಳಕೆ ಸೇರಿದಂತೆ ಮತ್ತಿತರ ಅನಿಲ ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಗೃಹ ಬಳಕೆ ಸಿಲಿಂಡರ್ ಗಳ ವಿತರಣೆ ಅದರಲ್ಲಿಯು ಏಕ ಸಿಲಿಂಡರ್ ಹೊಂದಿರುವವರಿಗೆ ವಿತರಣೆ ಯಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ ಎಂದು ದೂರುಗಳು ಕೇಳಿ ಬರುತ್ತಿವೆ. ಈ ಹಿಂದೆ ಬೇಡಿಕೆಗೆ ಅನುಗುಣವಾಗಿ ಅನಿಲ ಲಭ್ಯ ವಾಗುತ್ತಿತ್ತು. ಪಶ್ಚಿಮ ಎಷ್ಯಾ ದೇಶಗಳಲ್ಲಿನ ಯುದ್ಧ ದ ಬಿಕ್ಕಟಿನ್ನಿಂದಾಗಿ ಸಮರ್ಪಕವಾಗಿ ಅನಿಲಗಳು ಆಮದು ಆಗದೆ ಇರುವ ಹಿನ್ನೆಲೆ, ಸ್ವಲ್ಪ ತೊಂದರೆಗಳು ಉಂಟಾಗಿವೆ. ಆದರೆ ಗೃಹ ಬಳಕೆ ಅನಿಲಗಳ ವಿತರಣೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ವಿತರಿಸಲು ಸರಕಾರ ಬದ್ಧವಿದೆ.ಗೃಹ ಬಳಕೆ ವಿತರಣೆಯಲ್ಲಿ ಏಕ ಸಿಲಿಂಡರ್ ಹೊಂದಿರುವ ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗೆಗೆ ಹಾಗೂ ವಿತರಣಾ ಸಂಸ್ಥೆಯವರಿಗೆ ಸೂಚಿಸಿದರು.

ವಾಣಿಜ್ಯ ಬಳಕೆಯ ಗ್ರಾಹಕರಿಗೆ ಶೇ. 20 ರಷ್ಟು ಪ್ರಮಾಣದಲ್ಲಿ ಕೊಡುವ ಉದ್ದೇಶ ಸರಕಾರ ಹೊಂದಿರುವ ಬಗ್ಗೆ ಸರಕಾರ ತಿಳಿಸಿದೆ. ವಿದ್ಯಾರ್ಥಿ ನಿಲಯಗಳಿಗೆ, ಆಸ್ಪತ್ರೆ, ಶಾಲೆ ಸೇರಿದಂತೆ ಮತ್ತಿತರ ಅತೀ ಅಗತ್ಯ ವಿರುವ ಸಂಸ್ಥೆಗಳಿಗೆ ಆದ್ಯತೆಯ ಮೇಲೆ ವಾಣಿಜ್ಯ ಸಿಲಿಂಡರ್ ಗಳ ವಿತರಣೆಯನ್ನು ಮಾಡಬೇಕು ಎಂದ ಅವರು, ಮಣಿಪಾಲ ವ್ಯಾಪ್ತಿಯಲ್ಲಿ ವಾಣಿಜ್ಯ ಸಿಲಿಂಡರ್ ನೋಂದಾಯಿತ ಗ್ರಾಹಕರಿಗೆ ನೋಂದಣಿ ಮಾಡಿಕೊಂಡ ಸಂಸ್ಥೆಗಳಿಂದ ಅನಿಲ ವಿತರಣೆ ಆಗುತ್ತಿಲ್ಲ. ಇದರಿಂದ ತೊಂದರೆ ಉಂಟಾಗುತ್ತಿದೆ. ನೋಂದಾಣಿಯನ್ನು ಇತರೆ ಸಂಸ್ಥೆಗಳಿಗೆ ವರ್ಗಾಯಿಸುವುದು ಅವಶ್ಯವಿದ್ದು, ಈ ಬಗ್ಗೆ ಅನಿಲ ಕಂಪನಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಇಲ್ಲ. ಆದರೆ ಅನಧಿಕೃತವಾಗಿ ದಾಸ್ತಾನು ಮಾಡದಂತೆ ಎಚ್ಚರ ವಹಿಸಬೇಕು. ಈಗಾಗಲೇ ಕೆಲವು ಗ್ರಾಹಕರು ಸಾಕಷ್ಟು ದಿನಗಳಿಂದ ಜನರೇಟರ್ ಗಳಿಗೆ ಹಾಗೂ ಮೀನುಗಾರಿಕಾ ಬೋಟ್ ಗಳಿಗೆ, ನಿರಂತರವಾಗಿ ಕೊಂಡೋಯುವವರಿಗೆ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಮಾತನಾಡಿ, ವಾಹನಕ್ಕೆ ಬಳಕೆ ಮಾಡುವ ಎಲ್ ಪಿ ಜಿ ಹಾಗೂ ಸಿ ಎನ್ ಜಿ ಅನಿಲಗಳನ್ನು ಆಯಿಲ್ ಕಾರ್ಪೋರೇಶನ್ ಸಂಸ್ಥೆಗಳು ನಿಗಧಿಪಡಿಸಿರುವ ದರದಲ್ಲಿಯೇ ವಿತರಿಸಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ನಿಗಧಿಪಡಿಸಿರುವ ಮೊತ್ತವನ್ನು ಹಾಗೂ ದಾಸ್ತನನ್ನು ತಮ್ಮ ವಿತರಣಾ ಕೇಂದ್ರದಲ್ಲಿ ಜನಸಾಮಾನ್ಯರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು, ಒಂದೊಮ್ಮೆ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆದಲ್ಲಿ ಅಂಥವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಬಳಕೆ ಸಿಲಿಂಡರ್ ಗಳನ್ನು ಇತರೆ ಉದ್ದೇಶಕ್ಕೆ ಬಳಸದಂತೆ ನೋಡಿಕೊಳ್ಳಬೇಕು ಒಂದೊಮ್ಮೆ ಇತರೆ ಉದ್ದೇಶಕ್ಕೆ ಬಳಸಿದಲ್ಲಿ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಏಕ ಬಳಕೆ ಸಿಲಿಂಡರ್ ಹೊಂದಿರುವ ಗ್ರಾಹಕರುಗಳು, ಸಿಲಿಂಡರ್ ಪಡೆದ
25 ದಿನಗಳ ನಂತರ ಹಾಗೂ ಎರಡು ಸಿಲಿಂಡರ್ ಹೊಂದಿರುವ ಗ್ರಾಹಕರುಗಳು ಅನಿಲ ಪೂರೈಕೆ ಮಾಡಿದ 35 ದಿನಗಳ ನಂತರ ಬುಕಿಂಗ್ ಮಾಡಲು ಅವಕಾಶವಿದೆ. ಆದಷ್ಟು ಮನೆ ಮನೆಗೆ ಗೃಹ ಬಳಕೆಯ ಸಿಲಿಂಡರ್ ವಿತರಣೆ ಮಾಡುವುದರೊಂದಿಗೆ ಏಜನ್ಸಿ ಗಳ ಮುಂದೆ ಸಾಲುಗಟ್ಟಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ವಿತರಕರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ,
ಗ್ಯಾಸ್ಏಜನ್ಸಿ ಹಾಗೂ ಬಂಕುಗಳ ಮಾಲೀಕರುಗಳು, ವಿತರಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here