Saturday, February 15, 2025
Homeರಾಜ್ಯಮದ್ಯಪ್ರಿಯರಿಗೆ ಮತ್ತೊಮ್ಮೆ ಶಾಕ್‌ | ಅ.1ರಿಂದಲೇ ಬಿಯರ್‌ ಬೆಲೆ ಏರಿಕೆ ಸಾಧ್ಯತೆ!

ಮದ್ಯಪ್ರಿಯರಿಗೆ ಮತ್ತೊಮ್ಮೆ ಶಾಕ್‌ | ಅ.1ರಿಂದಲೇ ಬಿಯರ್‌ ಬೆಲೆ ಏರಿಕೆ ಸಾಧ್ಯತೆ!

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೊಮ್ಮೆ ಶಾಕ್‌ ನೀಡಲು ಮುಂದಾಗಿದೆ. ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಹೆಚ್ಚಿಸಿದ್ದ ಸರ್ಕಾರ ಈಗ ಮತ್ತೊಮ್ಮೆ ಬೆಲೆ ಏರಿಕೆಗೆ ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ಐಎಂಎಲ್ ಮೇಲೆ ಶೇ. 20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚವರಿ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು.
ಇದೀಗ ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರ್ಕಾರ ಅಸ್ತು ಅಂದಿದ್ದು, ಅ.1ರಿಂದ ಬೆಲೆ ಏರಿಕೆಯಾಗುವ ಸಾಧ್ಯತೆ ಖಚಿತವಾದಂತಿದೆ. ಕಳೆದ ಆ.29ರಿಂದ ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಅ.1ರಿಂದ 10ರಿಂದ 20 ರೂ. ವರೆಗೂ ದರ ಏರಿಕೆಯಾಗುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular