ಬೆಳಾಲು : ನ 24 ಬೆಳಾಲು ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸಭಾಧ್ಯಕ್ಷತೆಯನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಆನಂತೋಡಿ ಬೆಳಾಲು ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ಇವರು ವಹಿಸಿದ್ದರು. ವೇದಿಕೆಯಲ್ಲಿ ಜಾತ್ರೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಉದಿತ್ ಕುಮಾರ್ ಜೈನ್,ದೇವಸ್ಥಾನದ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ವ್ಯವಸ್ಥಾಪನ ಸಮಿತಿಯ ಉಪಾಧ್ಯಕ್ಷರಾದ ಮಮತಾ ದಿನೇಶ್ ಪೂಜಾರಿ,ಮಹಿಳಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ,ಭಜನಾ ಮಂಡಳಿಯ ಕಾರ್ಯದರ್ಶಿಯಾದ ವಿಘ್ನೇಶ್ ಅನಂತೋಡಿ ಇವರುಗಳು ಉಪಸ್ಥಿತರಿದ್ದರು.ವ್ಯವಸ್ಥಾಪನ ಸಮಿತಿಯ ಸದಸ್ಯರು,ಬೈಲುವಾರು ಸಮಿತಿಯ ಸದಸ್ಯರು,ಭಜನಾ ಮಂಡಳಿಯ ಸದಸ್ಯರು,ಮಹಿಳಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಕೆ ಶಿವಪ್ರಸಾದ್ ಗೊಲ್ಲರವರು ಸ್ವಾಗತಿಸಿ, ಎಳ್ಳುಗದ್ದೆ ಸತೀಶ್ ಗೌಡರವರು ಧನ್ಯವಾದವಿತ್ತರು.
ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
RELATED ARTICLES