ಬೆಳಾಲು ಗ್ರಾಮ ಪಂಚಾಯತ್‌ : ಮಕ್ಕಳ ಗ್ರಾಮ ಸಭೆ

0
6

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ ಹಾಗೂ ಪಂಚಾಯತ್ ನಲ್ಲಿ ಮಕ್ಕಳಿಗಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಇವರು ಮಾತನಾಡಿ ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯಗಳು, ಬಾಲ ಕಾರ್ಮಿಕರು, ಬಾಲ್ಯ ವಿವಾಹ, ಪೋಕ್ಸ ಕಾಯ್ದೆಯ ಬಗ್ಗೆ ಸವಿವರವಾಗಿ ತಿಳಿಸಿದರು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಡ್ಯಾನಿ ಮಕ್ಕಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ವಿವರಿಸಿದರು. ಅಧ್ಯಕ್ಷತೆಯನ್ನು ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ವಿದ್ಯಾರ್ಥಿನಿ ನೇತ್ರಾವತಿ ಇವರು ವಹಿಸಿಕೊಂಡರು . ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲ ಹೋರಾಡಬೇಕು ಎಂದು ತಿಳಿಸಿದರು. ಗ್ರಾಮಸಭೆಯಲ್ಲಿ ಜಿಲ್ಲೆ, ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪಂಚಾಯಿತಿನ ಉಪಾಧ್ಯಕ್ಷೆ ಗೀತಾ ,ಎಸ್ ಡಿ ಎಂ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಶಿಕ್ಷಕ ಕಿರಣ್ ಜೈನ್, ಮಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಯೋಗೀಶ್ ಹೆಚ್. ಆರ್., ಕೊಲ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕರಿಯಣ್ಣ, ಶ್ರೀ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಲೋಚನ , ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರವಲ್ಲಿಕ ,ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ತನುಜ ಉಪಸ್ಥಿತರಿದ್ದರು.

ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಲ್ಪಾಡಿಯ ವಿದ್ಯಾರ್ಥಿನಿ ತನ್ವಿ ಸ್ವಾಗತಿಸಿ,ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಫಾನ್ ಧನ್ಯವಾದ ಸಲ್ಲಿಸಿದರು. ಮಾಯಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಶಶಿಧರ್ ನಿರೂಪಿಸಿದರು.

LEAVE A REPLY

Please enter your comment!
Please enter your name here