ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ನೆರವೇರಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಪ್ರಜಾಪ್ರಭುತ್ವ ದಿನದ ಮಹತ್ವ ತಿಳಿಸಿದರು.
ವಿದ್ಯಾರ್ಥಿಗಳು ತಯಾರಿಸಿದ ಭಿತ್ತಿಪತ್ರಿಕೆಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು. ಗಣರಾಜ್ಯೋತ್ಸವದ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

