ಗ್ರಾಮ ಪಂಚಾಯಿತ್ ಮಕ್ಕಳ ಗ್ರಾಮ ಸಭೆ ಮಕ್ಕಳ ಗ್ರಾಮ ಸಭೆ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಉನ್ನತಿಕರಿಸಿದ ಶಾಲೆ ಮಾಯ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಸೃಜನ್ಯ ವಹಿಸಿಕೊಂಡರು .ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ವಿದ್ಯಾರ್ಥಿಗಳಿಗೆ ಗ್ರಾಮ ಸಭೆಯ ಮಹತ್ವ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ವಿದ್ಯಾರ್ಥಿಗಳು ಅನುಸರಿಸಬೇಕಾದ ರೀತಿ ನೀತಿಗಳು ಹಾಗೂ ಗ್ರಾಮ ಪಂಚಾಯಿತಿಗಳಿಂದ ಶಾಲೆಗಳಿಗೆ ಸಿಗುವಂತ ಸೌಲಭ್ಯಗಳು ಹಾಗೂ ಅನುದಾನಗಳ ಬಗ್ಗೆ ವಿವರವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಸಂಚಾರಿ ಪೊಲೀಸ್ ಸ್ಟೇಷನ್ ಇದರ ಏಎಸ್ಐ ಚಿನ್ನಪ್ಪ ಭಾಗವಹಿಸಿ ರೋಡ್ ರೂಲ್ಸ್ ಬಗ್ಗೆ ಹಾಗೂ ಕಾನೂನುಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್ .ಡಿ. ಎಂ ಪ್ರೌಢಶಾಲೆ ಬೆಳಾಲು ಇಲ್ಲಿನ ಮುಖ್ಯೋಪಾಧ್ಯಾಯರಾಗದ ಶ್ರೀ ಜಯರಾಮ ಮಯ್ಯ ಇವರು ವಿದ್ಯಾರ್ಥಿಗಳು ಪ್ರಸ್ತುತ ದಿನಗಳಲ್ಲಿ ಎದುರಿಸುವ ಸಮಸ್ಯೆಗಳು ಹಾಗೂ ತೊಂದರೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ವಿದ್ಯಾರ್ಥಿಗಳು ಗ್ರಾಮಸಭೆಯಲ್ಲಿ ತಮ್ಮ ಬೇಡಿಕೆಯನ್ನು ಮುಂದಿಟ್ಟರು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸತೀಶ್ ಎಳ್ಳು ಗದ್ದೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತಾರಾನಾಥ್ ನಾಯ್ಕ್ ಆಶಾ ಕಾರ್ಯಕರ್ತೆ ನಿರ್ಮಲ, ಬೆಳಾಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಮಾಯ ಎಸ್‌ಡಿಎಂ ಬೆಳಾಲು, ಕೊಲ್ಪಾಡಿ ಪೆರಿಯಡ್ಕ ಹಾಗೂ ಸರಸ್ವತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಬೆಳಾಲು ಗ್ರಾಮ ಪಂಚಾಯತಿ ನ ಸಿಬ್ಬಂದಿಗಳು ಸಹಕರಿಸಿದರು.