ಕಡಬ : ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ B.Com ಹಾಗೂ BBA ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ವಿದ್ಯಾಭಿಮಾನಿಗಳ ಸಂಘ ಹಾಗೂ ದಾನಿಗಳ ಸಹಕಾರದೊಂದಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಈ ಯೋಜನೆಯಡಿ ಮೊದಲು ಪ್ರವೇಶ ಪಡೆಯುವ 50 ವಿದ್ಯಾರ್ಥಿಗಳಿಗೆ ಸಂಪೂರ್ಣ ಕಾಲೇಜು ಶುಲ್ಕವನ್ನು ದಾನಿಗಳು ಭರಿಸಲಿದ್ದು, ಉಚಿತ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಪ್ರತಿದಿನ ಕಾಲೇಜಿನಲ್ಲಿಯೇ ಉಚಿತ ಮಧ್ಯಾಹ್ನದ ಬಿಸಿ ಊಟ ವ್ಯವಸ್ಥೆಯನ್ನೂ ಮಾಡಲಾಗಿದೆ.
NAAC ‘B+’ ಮಾನ್ಯತೆ ಪಡೆದಿರುವ ಈ ಕಾಲೇಜಿನಲ್ಲಿ ಸುಸಜ್ಜಿತ ಕಟ್ಟಡ, ಅತ್ಯುತ್ತಮ ಪ್ರಯೋಗಾಲಯ, ಸಮೃದ್ಧ ಗ್ರಂಥಾಲಯ, ಅನುಭವಿ ಉಪನ್ಯಾಸಕರಿಂದ ಗುಣಮಟ್ಟದ ಶಿಕ್ಷಣ, ಕಂಪ್ಯೂಟರ್ ಬೇಸಿಕ್ ಕೋರ್ಸ್ ಸೇರಿದಂತೆ ವಿವಿಧ ಶೈಕ್ಷಣಿಕ ಸೌಲಭ್ಯಗಳು ಲಭ್ಯವಿವೆ.
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ ಎನ್‌ಎಸ್‌ಎಸ್, ರೋವರ್–ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕ, ಕೌಶಲ್ಯಾಭಿವೃದ್ಧಿ ತರಬೇತಿ, ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮಗಳನ್ನು ಸಹ ಕಾಲೇಜು ಒದಗಿಸುತ್ತಿದೆ. ವಿದ್ಯಾರ್ಥಿ ವೇತನಗಳ ಸೌಲಭ್ಯ ಹಾಗೂ ವಿಶಾಲ ಆಟದ ಮೈದಾನವೂ ಕಾಲೇಜಿನ ವಿಶೇಷ ಆಕರ್ಷಣೆಯಾಗಿದೆ.
ರಾಜ್ಯ ಹೆದ್ದಾರಿಯ ಸಮೀಪದಲ್ಲಿರುವ ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಈ ಸೀಮಿತ ಅವಧಿಯ ವಿಶೇಷ ಅವಕಾಶವನ್ನು ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು ಸದುಪಯೋಗಪಡಿಸಿಕೊಳ್ಳುವಂತೆ ಕಾಲೇಜು ಆಡಳಿತ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ವೇಣುಗೋಪಾಲ್ ಕಳುವಾಜೆ ಅವರನ್ನು 81971 53783 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

