ಬೆಳಪು – ಪಣಿಯೂರು ಶ್ರೀ ರಕ್ತೇಶ್ವರಿ ದೈವದ ಸ್ಥೂಪ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಶ್ರೀ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರದ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ

0
8

ಬೆಳಪು: ಶ್ರೀ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯ ಪ್ರಥಮ ಹಂತವಾಗಿ, ಶ್ರೀ ರಕ್ತೇಶ್ವರಿ ದೈವದ ಸ್ಥೂಪ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ವೇದಮೂರ್ತಿ ಬೆಟ್ಟಿಗೆ ಶ್ರೀ ವೆಂಕಟರಾಜ ತಂತ್ರಿಯವರ ನೇತೃತ್ವದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿತು.

ಕ್ಷೇತ್ರದ ಸಮಗ್ರ ಜೀರ್ಣೋದ್ಧಾರ ಕಾರ್ಯವನ್ನು ಹಂತಹಂತವಾಗಿ ಮುಂದುವರಿಸುವ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ಬೆಂಗಳೂರು ಹಾಗೂ ಮುಂಬೈಯಲ್ಲಿ ಸಭೆಗಳನ್ನು ನಡೆಸಿ, ಅಲ್ಲಿನ ಸಮಿತಿಗಳನ್ನು ರಚಿಸುವುದು, ಹಾಗೂ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಸಂದರ್ಭದಲ್ಲಿ ಶ್ರೀ ರಕ್ತೇಶ್ವರಿ ದೈವದ ಪ್ರತಿಷ್ಠಾಪನೆಯನ್ನು ನೆರವೇರಿಸುವುದು ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಐಕಳ ಬಾವ ಡಾ. ದೇವಿಪ್ರಸಾದ್ ಶೆಟ್ಟಿ, ಬೆಳಪು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು.

ಅದೇ ಸಂದರ್ಭದಲ್ಲಿ, ಕ್ಷೇತ್ರದ ಸಮಗ್ರ ಜೀರ್ಣೋದ್ಧಾರಕ್ಕೆ ಸಂಬಂಧಿಸಿದ ಮನವಿ ಪತ್ರವನ್ನು ಬಿಡುಗಡೆಗೊಳಿಸುವುದಾಗಿಯೂ ತೀರ್ಮಾನಿಸಲಾಯಿತು.

ಬೆಳಪು–ಪಣಿಯೂರು ಗ್ರಾಮಸ್ಥರು ಹಾಗೂ ಕ್ಷೇತ್ರದ ಭಕ್ತಾದಿಗಳು ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರ ಕಾರ್ಯಕ್ಕೆ ತನು–ಮನ–ಧನಗಳಿಂದ ಸಹಕರಿಸಿ, ಈ ಪುಣ್ಯ ಕಾರ್ಯವನ್ನು ಯಶಸ್ವಿಗೊಳಿಸುವ ಮೂಲಕ ಶ್ರೀ ದೈವಗಳ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಜೀರ್ಣೋದ್ಧಾರ ಸಮಿತಿಯು ವಿನಮ್ರವಾಗಿ ವಿನಂತಿಸಿದೆ.