ಬೆಳಗಾವಿ: ಬೆಳಗಾವಿಯ ಜೋಷಿಮಾಳ್ ಎಂಬಲ್ಲಿ ಬುಧವಾರ ಬೆಳಗ್ಗೆಯೇ ಮನಕಲಕುವ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಒಬ್ಬಾಕೆ ಯುವತಿ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂತೋಷ ಕುರಡೇಕರ್, ಸುವರ್ಣ ಕುರಡೇಕರ್, ಮಂಗಳಾ ಕುರಡೇಕರ್ ಮೃತಪಟ್ಟಿದ್ದು, ಸುನಂದಾ ಕುರಡೇಕರ್ ಸ್ಥಿತಿ ಚಿಂತಾಜನಕವಾಗಿದೆ. ತಾಯಿ, ಮಗ, ಮಗಳು ಸಾವಿಗೀಡಾದವರು. ಮತ್ತೊಬ್ಬ ಮಗಳು ಸುನಂದಾ ಕುರಡೇಕರ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಕುಟುಂಬಸ್ಥರು ವಿಷ ಸೇವಿಸಿದ್ದಾರೆ. ಗಂಭೀರವಾಗಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.