ಇತಿಹಾಸ ಪ್ರಸಿದ್ಧ ಸಾವಿರಾರು ವರ್ಷಗಳ ಇತಿಹಾಸವಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಖ್ಯಾತ ಕೊಳಲು ವಾದಕರಾದ ರಾಜೇಶ್ ಬಾಗಲೋಡಿ ಇವರ ಶಿಷ್ಯ ವೃಂದದಿಂದ ಏಕಕಾಲದಲ್ಲಿ 50 ಮಂದಿ ವಿದ್ಯಾರ್ಥಿಗಳಿಂದ ಕೊಳಲು ವಾದನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರು, ಖ್ಯಾತ ಜ್ಯೋತಿಷ್ಯರಾದ ವೇದಮೂರ್ತಿ ಶ್ರೀ ಬಿ.ಕೆ. ವಿಘ್ನೇಶ್ ಭಟ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಕುರ್ಕಾಲು ದಿನೇಶ್ ಶೆಟ್ಟಿ ಅವರು ಉಪಸ್ಥಿತರಿದ್ದರು.

