ಬೆಳ್ತಂಗಡಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ಉಜಿರೆಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿರಾಜ್ ಜೈನ್ ಎಂಬಾತನ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿರಾಜ್ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಶಿಕ್ಷಕನ ಕಿರುಕುಳ ಹಿನ್ನಲೆ ಬಾಲಕಿ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಳು. ಬಾಲಕಿಗೆ ಶಿಕ್ಷಕ 2023 ಜೂನ್ ನಿಂದ ಅಶ್ಲೀಲ ವೀಡಿಯೋ ತೋರಿಸಿ ಅಸಭ್ಯ ವರ್ತನೆ ತೋರುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.