ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ನಡೆದ ಸುಭದ್ರ ಭಾರತಕ್ಕಾಗಿ, ಸುರಕ್ಷಿತ ಕರ್ನಾಟಕಕ್ಕಾಗಿ ರಾಷ್ಟ್ರ ಮೊದಲು ಎಂಬ ದ್ಯೇಯ ದೊಂದಿಗೆ ನಡೆದ ತಿರಂಗ ಯಾತ್ರೆ ಕಾಲು ನಡಿಗೆಯು ಅಯ್ಯಪ್ಪ ಸ್ವಾಮಿ ಗುಡಿಯಿಂದ ಹೊರಟು ತಾಲೂಕು ಪಂಚಾಯತ್ ನಲ್ಲಿ ಸಮಾಪ್ತಿ ಹೊಂದಿತು. ಕಾರ್ಯಕ್ರಮದಲ್ಲಿ ವಿಧಾನಸಭಾ ಪರಿಷತ್ ಸದಸ್ಯರು ಆದ ಮಾನ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಸರ್ಕಾರದ ದೇಶ ವಿರೋಧಿ ದ್ವಂದ ನೀತಿಯನ್ನು ಖಂಡಿಸಿದರು.
ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಮಾತನಾಡಿ ದೇಶ ವಿರೋಧಿ ಚಟುವಟಿಕೆ ಬೆಂಬಲಿಸುವ ಸರ್ಕಾರದ ನಡೆಯನ್ನು ಖಂಡಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ ಸ್ವಾಗತಿಸಿ, ಜಯಪ್ರಸಾದ್ ಕಡಮ್ಮಾಜೆ ವಂದಿಸಿದರು. ಮಂಡಲ ಯುವಮೋರ್ಚಾ ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಭಾಜಪ ಪಕ್ಷದ ವಿವಿಧ ಮೋರ್ಚಾ ಮಹಾಶಕ್ತಿ ಕೇಂದ್ರದ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು ಭಾಗವಹಿಸಿದ್ದರು.