ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಎಂದು ತಿಳಿದುಬಂದಿದೆ.
ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಪೈಂಟಿಂಗ್ ವೃತ್ತಿ ನಡೆಸುತ್ತಿದ್ದು, ಗುರುವಾರ ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಗೆ ತೆರಳಿ, ಮನೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯಾಗಿದೆ.
ತಲೆಗೆ ಪೆಟ್ಟು ತಗಲಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.