ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನಂಜುಂಡ ಮಾಗಡಿ ಎಂದು ತಿಳಿದು ಬಂದಿದೆ.
2017ರಲ್ಲಿ ರೆಖ್ಯ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ಈತ ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಪೊಲೀಸರು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

