ಬೆಳ್ತಂಗಡಿ : ಕಾಪಿನಡ್ಕ ಸೇತುವೆಯ ಬಳಿ ಕಾರು ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
ಗುರುವಾಯನಕೆರೆ ಕಡೆಯಿಂದ ಸಂಚರಿಸುತ್ತಿದ್ದ ಕಾರು ಹಾಗೂ ಕಾಪಿನಡ್ಕ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದೆ, ರಿಕ್ಷಾ ಮತ್ತು ಕಾರಿನಲ್ಲಿದ್ದವರಿಗೆ ಗಾಯಗಳಾಗಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

