ಬೆಳ್ತಂಗಡಿ : ಕ್ರೇನ್ ಡಿಕ್ಕಿ ; ಪಾದಚಾರಿ ಮೃತ್ಯು

0
20

ಬೆಳ್ತಂಗಡಿ : ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏ. 7 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕ್ರೇನ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here