ಬೆಳ್ತಂಗಡಿ : ಮನೆಯ ಮುಂದೆ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

0
122

ಕನ್ಯಾಡಿ 1 ಗ್ರಾಮದ ಅಂಡೀರುಮಾರು ಎಂಬಲ್ಲಿ ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಎಂಬುವವರು ಚಿರತೆ ದಾಳಿಯಿಂದ ಗಾಯಗೊಂಡ ವ್ಯಕ್ತಿ . ಕೂಡಲೇ ಹತ್ತಿರದ ಅಡಿಕೆ ಮರವನ್ನೇರಿ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಸಂದರ್ಭ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಅವರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here