ಬೆಳ್ತಂಗಡಿ : ನವವಿವಾಹಿತ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ

0
129

ಮಂಗಳೂರು : ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ವಿವಾಹವಾಗಿದ್ದ ಯುವ ಉದ್ಯಮಿಯೊಬ್ಬ ಇತ್ತೀಚೆಗೆ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನೆಲ್ಯಾಡಿ ನಿವಾಸಿ ಸುದೀಪ್ ರೈ(36) ಮೃತ ಪಟ್ಟ ವ್ಯಕ್ತಿ . ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಿದ್ದರು. ಸುದೀಪ್ ರೈಗೆ ಕಾರ್ಕಳ ತಾಲೂಕಿನ ಯುವತಿ ಜೊತೆಗೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿತ್ತು.

ಸುದೀಪ್ ಅವರು ಬೆಳ್ತಂಗಡಿಯಲ್ಲಿ ಎಸ್‌ಆರ್ ಎನ್ ಗ್ರೂಪ್ ಹೆಸರಲ್ಲಿ ಇಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ ನಡೆಸುತ್ತಿದ್ದರು. ಈ ನಡುವೆ, ಸುದೀಪ್ ತಿಂಡಿಯ ಜೊತೆಗೆ ವಿಷ ಸೇವಿಸಿದ್ದಾರೆ ಎನ್ನಲಾಗುತ್ತಿದ್ದು ಆನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here