ಬೆಳ್ತಂಗಡಿ ರೋಟರಿ ಕ್ಲಬ್: 222 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

0
167

ಉಜಿರೆ: ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ತಮಗೆ ದೊರಕುವ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ಉತ್ತಮ ಸಂಸ್ಕಾರ ಹಾಗೂ ಗುರು-ಹಿರಿಯರಿಗೆ ಗೌರವ, ವಿನಯ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕೇನ್‌ಫಿನ್ ಹೋಮ್ಸ್ ಲಿಮಿಟೆಡ್‌ನ  ಡಿ.ಜಿ.ಎಂ. ಪ್ರಶಾಂತ್ ಜೋಶಿ ಹೇಳಿದರು.
ಅವರು ಗುರುವಾರ ಉಜಿರೆಯಲ್ಲಿ ರೋಟರಿ ಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ಕೇನ್‌ಫಿನ್ ಹೋಮ್ಸ್ ಸಹಯೋಗದಲ್ಲಿ 222 ವಿದ್ಯಾರ್ಥಿಗಳಿಗೆ ಇಪ್ಪತ್ತು ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿವೇತನದ ಸದುಪಯೋಗ ಪಡೆದು ದೃಢಸಂಕಲ್ಪ ಮತ್ತು ಏಕಾಗ್ರತೆಯಿಂದ ಅಧ್ಯಯನ ಮಾಡಿ ವಿದ್ಯಾರ್ಥಿಗಳು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಮುಂದೆ ತಾವು ಸ್ವಾವಲಂಬಿ ಜೀವನ ನಡೆಸುವಾಗ, ತಾವು ಪಡೆದ ವಿದ್ಯಾರ್ಥಿವೇತನಕ್ಕಿಂತಲೂ ಹೆಚ್ಚಿನ ನೆರವನ್ನು ಇತರರಿಗೆ ನೀಡಬೇಕು ಎಂದು ಅವರು ಸಲಹೆ ನೀಡಿದರು.
ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ, ಶುಭಾಶಂಸನೆ ಮಾಡಿ, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಸಾಮಾಜಿಕ ಪರಿವರ್ತನೆಯಾಗುತ್ತದೆ. ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಸದುಪಯೋಗ ಮಾಡಬೇಕು. ಸದಾ ನಗುಮೊಗದಿಒಂದ ಸಂಕಷ್ಟದಲ್ಲಿರುವವರಿಗೆ ಸಕಾಲಿಕ ನೆರವುನೀಡಿ ಅವರು ಸುಖ-ಶಾಂತಿ, ಸಂತೋಷದಿAದ ಜೀವನ ಮಾಡುವಂತೆ ಸಹಕರಿಸಿ ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದರು.
ಬೆಂಗಳೂರು ಇಂದಿರಾನಗರ ರೋಟರಿಕ್ಲಬ್‌ನ ಮಾಜಿ ಅಧ್ಯಕ್ಷರಾದ ಸುಪ್ರಿಯಾ ಖಾಂದಾರಿ ಮಾತನಾಡಿ, ವಿದ್ಯಾರ್ಥಿಗಳು ಮುಂದೆ ಜವಾಬ್ದಾರಿಯುತ ಆದರ್ಶ ನಾಯಕರಾಗಿ ಸಮಾಜ ಸೇವೆ ಮತ್ತು ದೇಶಸೇವೆ ಮಾಡಬೇಕು ಎಂದು ಹೇಳಿದರು.
ಕೇನ್‌ಫಿನ್ ಹೋಮ್ಸ್ನ ಉಪಪ್ರಬಂಧಕಿ ಚಿತ್ರಾಂಗದ ಸಾರಂಗಿ, ಸುರೇಶ್ ಸಾಲಿಯಾನ್, ಡಾ. ಎ. ಜಯಕುಮಾರ್ ಶೆಟ್ಟಿ, ರೋಟರಿ ಸೇವಾ ಟ್ರಸ್ಟ್ನ ಅಧ್ಯಕ್ಷ ಶ್ರೀಕಾಂತ್ ಕಾಮತ್  ವಿದ್ಯಾರ್ಥಿವೇತನ ಸಮಿತಿ ಅಧ್ಯಕ್ಷ ಅಬೂಬಕ್ಕರ್, ಗೀತಾಪ್ರಭು ಉಪಸ್ಥಿತರಿದ್ದರು.
ಮಂಗಳೂರಿನ ಸರ್ವಜ್ಞ ಐ.ಎ.ಎಸ್. ಅಕಾಡೆಮಿಯ ಸುರೇಶ್, ಎಂ.ಎಸ್. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗಾವಕಾಶಗಳ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿದರು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ್ ಪ್ರಭು ಸ್ವಾಗತಿಸಿದರು. ಕಾರ್ಯದರ್ಶಿ ಉಜಿರೆಯ ಡಾ. ದಯಾಕರ್, ಎಂ.ಎA. ಧನ್ಯವಾದವಿತ್ತರು.
ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here