ಬೆಳ್ತಂಗಡಿ : ಮೂರು ವರ್ಷದ ಬಾಲಕ ರಸ್ತೆ ಅಪಘಾತದಲ್ಲಿ ದುರ್ಮರಣ

0
218

 ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಪುತ್ರ ಮುಹಮ್ಮದ್ ಹಝೀರಿನ್ ಎಂದು ಗುರುತಿಸಲಾಗಿದೆ. ಮೃತ ಬಾಲಕ ತನ್ನ ಮನೆಯ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿ, ಹಿಂದಿರುಗುವಾಗ ರಸ್ತೆ ದಾಟಲು ಪ್ರಯತ್ನಿಸುವ ವೇಳೆ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here