ವರದಿ ರಾಯಿ ರಾಜ ಕುಮಾರ
ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಚ್ಚರಕಟ್ಟೆ ಇವರ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಚ್ಚರಕಟ್ಟೆ ಬೆಳುವಾಯಿ ಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳುವಾಯಿಯ ಮರಿಯಂ ನಿಕೇತನ ಆಂಗ್ಲ ಮಾಧ್ಯಮ ಶಾಲೆಯು ಕಿರಿಯ ವಿಭಾಗ, ಹಿರಿಯ ವಿಭಾಗ ಹಾಗೂ ಪ್ರೌಢ ವಿಭಾಗ ಈ ಮೂರು ವಿಭಾಗದಲ್ಲೂ ಹೆಚ್ಚು ಪ್ರಶಸ್ತಿ ಪತ್ರಗಳನ್ನು ಬಾಚಿಕೊಂಡು ಸಮಗ್ರ ಪ್ರಶಸ್ತಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಪ್ರಥಮ-20, ದ್ವಿತೀಯ-13, ತೃತೀಯ-4 ಹೀಗೆ
ಒಟ್ಟು 37 ಪ್ರಶಸ್ತಿ ಪತ್ರಗಳನ್ನೂ
ತಮ್ಮದಾಗಿಸಿಕೊಂಡು ಇತರರಿಗೆ ಪ್ರೇರಣೆಯಾಗಿದ್ದಾರೆ. ಕ್ರಿಯಾಶೀಲ ಶಿಕ್ಷಕರ ಅವಿರತ ಶ್ರಮ ಹಾಗೂ ವಿದ್ಯಾರ್ಥಿಗಳ ಛಲ ಬಿಡದ ಪ್ರಯತ್ನದ ಫಲವಾಗಿ ಈ ಪ್ರಶಸ್ತಿಯನ್ನು ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಮರಿಯಂ ನಿಕೇತನ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಜೆಸಿಂತಾ ಲಸ್ರಾದೊ ಹರ್ಷ ವ್ಯಕ್ತಪಡಿಸಿದರು.

