-ಮಂದಾರ ರಾಜೇಶ್ ಭಟ್
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಹಾಗೂ ಸಾಹಿತಿ ಡಾ. ರಾಮಕೃಷ್ಣ ಶಿರೂರು ಅವರು ಕರ್ನಾಟಕ ರಾಜ್ಯ ಅಕ್ಷರದೀಪ ಪ್ರತಿಷ್ಠಾನದ ಪ್ರತಿಷ್ಠಿತ ‘ದ.ರಾ. ಬೇಂದ್ರೆ ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಕಳೆದ ಮೂರು ದಶಕಗಳಿಂದ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಇವರು, ಶಿಕ್ಷಕರಾಗಿ ಹಾಗೂ ವಿವಿಧ ಸಂಘಟನೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ಸಾಹಿತ್ಯ ಸೌರಭ ಮತ್ತು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕರಾಗಿ ಇವರ ಸೇವೆ ಸ್ಮರಣೀಯವಾಗಿದೆ.
ಧಾರವಾಡದ ರಂಗಾಯಣದ ರಂಗಮನೆಯಲ್ಲಿ ನವೆಂಬರ್ 15ರಂದು ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರವೀಣ್ ಕನ್ಯಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗಣಪತಿ ಹೆಗಡೆ ದಾಂಡೇಲಿ ತಿಳಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

