ಬೆಂಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದು ಚಲಿಸುತ್ತಿದ್ದ ಕಾರು..!

0
16

ದೇವನಹಳ್ಳಿ : ಚಲಿಸುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರು ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಮಾರ್ಗ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ.

ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here