Thursday, September 12, 2024
Homeಅಪಘಾತಬೆಂಗಳೂರು: ಹೊತ್ತಿ ಉರಿದ ಖಾಸಗಿ ಕಂಪನಿ ಕಟ್ಟಡ

ಬೆಂಗಳೂರು: ಹೊತ್ತಿ ಉರಿದ ಖಾಸಗಿ ಕಂಪನಿ ಕಟ್ಟಡ

ಬೆಂಗಳೂರು: ಆ‌ರ್.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಖಾಸಗಿ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸುಮಾರು 60 ಮಂದಿ ಕಟ್ಟಡದ ಒಳಗಡೆ ಇದ್ದರು ಎಂದು ತಿಳಿದು ಬಂದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಿರಾಕಲ್ ಡ್ರಿಂಕ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡದ ಕೆಳ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೆಂಕಿ ಅವಘಡ ಸಂಭವಿಸಿದಾಗ ಕೆಲ ಉದ್ಯೋಗಿಗಳು ಕಟ್ಟಡದಲ್ಲಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು, RT ನಗರ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಅಗ್ನಿ ಅನಾಹುತದ ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

RELATED ARTICLES
- Advertisment -
Google search engine

Most Popular