ಆಗ್ನೇಯ ಬೆಂಗಳೂರಿನ ಚಂದಾಪುರದಲ್ಲಿರುವ ಟೆಕ್ಕಿ ಒಡೆತನದ ಮನೆಯ ಮೂರನೇ ಮಹಡಿಯ ರೂಮ್ ನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬಳ ಕೊಳೆತ ಶವ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ಪೊಲೀಸರು ಕೊಠಡಿಯಿಂದ ಮಾದಕ ದ್ರವ್ಯಗಳು ಮತ್ತು ಸಿರಿಂಜ್ ಅನ್ನು ವಶಪಡಿಸಿಕೊಂಡಿದ್ದಾರೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಸಂತ್ರಸ್ತೆಗೆ ಸುಮಾರು 25 ವರ್ಷ ವಯಸ್ಸಾಗಿದ್ದು, ಪಶ್ಚಿಮ ಬಂಗಾಳದವಳು ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾಗುವ ಮೊದಲು ಆಕೆಯನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆಯ ದೇಹವನ್ನು ಪತ್ತೆಹಚ್ಚಿದಾಗ ಕೋಣೆಯಲ್ಲಿ 40ರ ಹರೆಯದ ವ್ಯಕ್ತಿಯೊಬ್ಬನೊಂದಿಗೆ ಆಕೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಕೊಳೆತಿದ್ದು ದೇಹದ ಮೇಲೆ ಗಾಯಗಳಿವೆಯೇ ಎಂದು ಕಂಡುಹಿಡಿಯಲು ನಮಗೆ ಸಾಧ್ಯವಾಗಲಿಲ್ಲ, ಶವಪರೀಕ್ಷೆಯ ವರದಿಯು ಸಾವಿಗೆ ಕಾರಣ ಮತ್ತು ಅತ್ಯಾಚಾರ ನಡೆದಿದೆಯೇ ಎಂದು ಪತ್ತೆ ಹಚ್ಚಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.