Tuesday, January 14, 2025
Homeಅಪರಾಧಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್​ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

RELATED ARTICLES
- Advertisment -
Google search engine

Most Popular