Saturday, July 20, 2024
Homeಅಪರಾಧಬೆಂಗಳೂರು: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಂದೆಡೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. 23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ರಾಜಧಾನಿ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಸಂದರ್ಭದಲ್ಲಿಯೇ ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗತೊಡಗಿವೆ. ಅದರಲ್ಲೂ ನಗರದ ಪ್ರಸಿದ್ಧ ಉತ್ಸವದ ವೇಳೆ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಆತ ಸಾವಿಗೀಡಾಗಿದ್ದಾರೆ. ಈ ಮಧ್ಯೆ, ಹೈಗ್ರೌಂಡ್ಸ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದಂತ ಹೇಯ ಘಟನೆ ನಡೆದಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪದ ಬೆನ್ನಲ್ಲೇ ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ.

RELATED ARTICLES
- Advertisment -
Google search engine

Most Popular