ಬೆಂಗಳೂರು: ಮದ್ಯದ ಅಮಲಿನಲ್ಲಿ ಯುವಕನೊಬ್ಬ ತನ್ನ ತಾಯಿಯನ್ನು ಮೊಬೈಲ್ ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ, ಹತ್ಯೆಗೈದು ನಂತರ ಹೊರವಲಯದಲ್ಲಿರುವ ಹಳೆ ಚಂದಾಪುರದ ಅವರ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಮೃತರನ್ನು ಲಕ್ಷ್ಮೀದೇವಿ (41) ಎಂದು ಗುರುತಿಸಲಾಗಿದ್ದು, ದಿನಗೂಲಿ ಕೆಲಸ ಮಾಡುತ್ತಿದ್ದರು. ಆಕೆಯ ಮಗ ರಮೇಶ್ ಹೊಟೇಲ್‌ನಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ. ಲಕ್ಷ್ಮಿ ಅವರು ಪತಿ, ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ರಮೇಶ್ ಕುಡಿದ ಅಮಲಿನಲ್ಲಿ ಮನೆಗೆ ಬಂದ ನಂತರ ಲಕ್ಷ್ಮಿಮತ್ತು ರಮೇಶ್ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಗಾಗ ಮದ್ಯ ಸೇವಿಸಿ ತಾಯಿಯೊಂದಿಗೆ ಜಗಳವಾಡುತ್ತಿದ್ದ ರಮೇಶ್, ನಿಯಂತ್ರಣ ತಪ್ಪಿ ಸಿಟ್ಟಿನಿಂದ ಮೊಬೈಲ್ ಚಾರ್ಜಿಂಗ್ ಕೇಬಲ್‌ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಬಳಿಕ ತಾನೂ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ನಂತರ ಮನೆಗೆ ಭೇಟಿ ನೀಡಿದ ಕುಟುಂಬಸ್ಥರು, ರಮೇಶ್ ಮತ್ತು ಲಕ್ಷ್ಮಿ ಇಬ್ಬರೂ ಸಾವನ್ನಪ್ಪಿರುವುನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸಂಬಂಧ ಚಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.