ಬೆಂಗಳೂರು ಕಾಲ್ತುಳಿತ: ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಪತ್ರ, ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ

0
171

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ  11 ಜನ ಜೀವ ಬಿಟ್ಟಿದ್ದರು. ಇದೇ ಕಾರಣಕ್ಕೆ ರಾತ್ರೋರಾತ್ರಿ ಪೊಲೀಸ್ ಅಧಿಕಾರಿಗಳನ್ನ ಅಮಾನತು ಕೂಡ ಮಾಡಲಾಗಿತ್ತು.‌ ಬಳಿಕ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯ ಈ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ಸಿಟಿಜನ್ ರೈಟ್ಸ್ ಫೌಂಡೇಷನ್  ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆ ಪೂರ್ಣವಾಗುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಸಾಮಾಜಿಕ ಹಿತಾಸಕ್ತಿ ಚಟುವಟಿಕೆಗಳಲ್ಲಿ ತೊಡಗಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ಬಿಟ್ ಕಾಯಿನ್, ಕೋವಿಡ್, ಬಿಬಿಎಂಪಿ ಅಕ್ರಮಗಳು, ನಿವೇಶನ ಹಂಚಿಕೆ ಅಕ್ರಮ, ಕೆಐಎಡಿಬಿ ಅವ್ಯವಹಾರಗಳು, ವೈದ್ಯಕೀಯ ಶಿಕ್ಷಣ ಇಲಾಖೆಗಳ ಹಗರಣ ಸೇರಿದಂತೆ ಅನೇಕ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಗಮನಸೆಳೆದಿದ್ದು, ಅನೇಕ ಪ್ರಕರಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಗಳ ಮೂಲಕ ಕಾನೂನು ಹೋರಾಟ ನಡೆಸಿದೆ.

LEAVE A REPLY

Please enter your comment!
Please enter your name here