ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ಹಾಗೂ ತಾಯಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.