ಬಂದಾರು :ಬಂದಾರು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ ಬಂದಾರು ಇವುಗಳ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವವು ಮಾರ್ಚ್ 30 ರಂದು ಶ್ರೀ ಕ್ಷೇತ್ರದಲ್ಲಿ ಜರುಗಿತು . ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಭೇಟಿ ನೀಡಿ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಮಿತಿಯ ಪ್ರಮುಖರು, ಹಿರಿಯರು, ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.