Thursday, December 5, 2024
HomeUncategorizedನವೆಂಬರ್ 11 ರಂದು ಕಲಾಕಂಚ ಕೇರಳ ಶಾಖೆಯಿಂದ ಭಗವದ್ಗೀತಾ ಕಂಠಪಾಠ ಸ್ಪರ್ಧೆ

ನವೆಂಬರ್ 11 ರಂದು ಕಲಾಕಂಚ ಕೇರಳ ಶಾಖೆಯಿಂದ ಭಗವದ್ಗೀತಾ ಕಂಠಪಾಠ ಸ್ಪರ್ಧೆ


ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಕೇರಳ ಗಡಿನಾಡ ಶಾಖೆಯಿಂದ ನವೆಂಬರ್ 11 ರಂದು ಸೋಮವಾರ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮಂಗಲ್ಪಾಡಿಯ ಏಕಾಹ ಭಜನಾ ಮಂದಿರದ ಸಭಾಂಗಣದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ಉಚಿತವಾಗಿ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಮಂಗಲ್ಪಾಡಿಯ ಏಕಾಹ ಭಜನಾ ಮಂಡಳಿಯ ವಜ್ರ ಮಹೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ವಿಭಾಗದ ಮಕ್ಕಳಿಗೆ ಸ್ಮರಣಿಕೆ, ಪುಸ್ತಕ, ನಗದು ಬಹುಮಾನಗಳು ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನಾ ಪತ್ರ ವಿತರಿಸಲಾಗುವುದು. ಸ್ಪರ್ಧಾಕಾಂಕ್ಷಿಗಳಾದ ಭಗವದ್ಗೀತ ಆಸಕ್ತ ಮಕ್ಕಳು ದಿನಾಂಕ 5-11-2024 ರೊಳಗೆ8281283091, 9446063502, 8289800677 ಈ ಸನೀಹವಾಣಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಬೇಕಾಗಿ ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಅಧ್ಯಕ್ಷರಾದ ಜಯಲಕ್ಷ್ಮೀ ಕಾರಂತ್ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular