ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಕೇರಳ ಗಡಿನಾಡ ಶಾಖೆ ಮತ್ತು ಏಕಾಹ ಭಜನಾ ಮಂಡಳಿಯ ವಜ್ರ ಮಹೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ನವೆಂಬರ್ 11 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮಂಗಲ್ಪಾಡಿಯ ಏಕಾಹ ಭಜನಾ ಮಂದಿರದ ಸಭಾಂಗಣದಲ್ಲಿ ಕರ್ನಾಟಕ 69ನೇ ರಾಜ್ಯೋತ್ಸವ ಪ್ರಯುಕ್ತ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ಉಚಿತವಾಗಿ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಮಿತಿ ಸದಸ್ಯರಾದ ಶಿಲ್ಪಾ ಉಮೇಶ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಲಾಕುಂಚ ಕೇರಳದ ಗಡಿನಾಡಿನ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮೀ ಕಾರಂತ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಏಕಾಹ ಭಜನಾ ಮಂಡಳಿಯ ಟ್ರಸ್ಟಿಗಳಾದ ಲಿಂಗಪ್ಪ ಪಟೇಲ್, ನಂದೋಡಿಯ ಗೀತಜ್ಞಾನ ಯಜ್ಷ ಸಂಸ್ಥೆಯ ಪ್ರಧಾನ ಗುರುಗಳಾದ ಸುಬ್ರಯ ನಂದೋಡಿಯರು ಆಗಮಿಸಲಿದ್ದಾರೆ. ದಾವಣಗೆರೆಯ ಕಲಾಕುಂಚ ಡಿ.ಸಿ.ಎಂ. ಶಾಖೆಯ ಪ್ರಧಾನ ಕಾರ್ಯದರ್ಶಿ ಡಿ.ಹೆಚ್.ಚನ್ನಬಸಪ್ಪ, ಕೆ.ಸಿ.ಉಮೇಶ್, ಪ್ರಧಾನ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಇವರುಗಳು ಗೌರವ ಉಪಸ್ಥಿತರಿರುತ್ತಾರೆ.
ಮಕ್ಕಳ ಈ ಸ್ಪರ್ಧೆಯ ನಂತರ ವಿಜೇತರಿಗೆ ಸ್ಮರಣಿಕೆ, ಪುಸ್ತಕ, ನಗದು ಬಹುಮಾನ, ಅಭಿನಂದನಾ ಪತ್ರ ವಿತರಿಸಲಾಗುವುದು. ಈ ಆಧ್ಯಾತ್ಮ ಇತಿಹಾಸ ಪರಂಪರೆಯ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಸಮಿತಿ ಸದಸ್ಯರಾದ ವಿದುಷಿ ದಿವ್ಯಾ ಚಂದನ್ ಕಾರಂತ್ ವಿನಂತಿಸಿದ್ದಾರೆ.
ನ.11 ರಂದು ಕಲಾಕುಂಚ ಕೇರಳ ಶಾಖೆಯಿಂದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಉದ್ಘಾಟನಾ ಸಮಾರಂಭ
RELATED ARTICLES