ಜ.4 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವಭಾವಿ ಸಿದ್ಧತಾ ಉಚಿತ ಕಾರ್ಯಾಗಾರ

0
70

ದಾವಣಗೆರೆ-ಡಿಸೆಂಬರ್, ದಾವಣಗೆರೆ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜನವರಿ 4 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಹತ್ತಿರವಿರುವ ಪಿ.ಜೆ. ಬಡಾವಣೆಯ ಡಿ.ಆರ್.ಎಂ.ಸ್ಕೌಟ್ ಭವನದ ಸಭಾಂಗಣದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ , ಎಂದು ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ತಿಳಿಸಿದ್ದಾರೆ .

ಸಾರ್ವಜನಿಕವಾಗಿ ಸರ್ಕಾರಿ ಶಾಲೆ, ಖಾಸಗಿ ಶಾಲೆಗಳ ಎಸ್.ಎಸ್.ಎಲ್.ಸಿ. ಓದುವ ಮಕ್ಕಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಪ್ರಕಟಿಸಿದ್ದಾರೆ. ದಿನಾಂಕ 31-12-2025 ರೊಳಗೆ 9538732777, 9945785170 ಈ ವ್ಯಾಟ್ಸಪ್ ಸಂಖ್ಯೆಗೆ ಹೆಸರು ನೊಂದಾಯಿಸಬೇಕಾಗಿದೆ. ಈ ಉಚಿತ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here