Sunday, July 14, 2024
Homeತುಳುನಾಡುಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ ಇಂದು ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ರವರು ಮಹಿಳಾ ಕಾರ್ಯಕರ್ತರು ಹೇಗೆ ಚುನಾವಣೆಯಲ್ಲಿ ತಮ್ಮ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಯಗಾರ ನೆರವೇರಿಸಿದರು.

ವೇದಿಕೆಯಲ್ಲಿ ಕರ್ನಾಟಕದ ಆರು ಲೋಕಸಭಾ ಕ್ಷೇತ್ರದ ಪ್ರಭಾರಿಗಳಗಿರುವ ಭಾನುಪ್ರಕಾಶ್ ಜೀ ಯವರು, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್,ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್.ಕೆ, ಬೈಂದೂರು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲ ಕುಂದರ್ ,ಪ್ರೇಮ ಪೂಜಾರಿ ಉಪಸ್ಥಿತರಿದ್ದರು,
ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭಾರತಿ ಶೇಟ್ ಸ್ವಾಗತಿಸಿದರು, ದೀಪ ಶೆಟ್ಟಿ ವಂದಿಸಿದರು ಹಾಗೂ ಸುಜಾತ ಮರವಂತೆ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular