ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಮೃತಪಟ್ಟ ಘಟನೆ ಭಟ್ಕಳದಲ್ಲಿ ನಡೆದಿದೆ. ಮೃತರನ್ನು ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಇಬ್ಬರು ಸಹೋದರರು ಸಂಜೆ ಕಬಡ್ಡಿ ಆಟ ಆಡಿದ ನಂತರ ಈಜಲು ಸಮುದ್ರಕ್ಕೆ ಇಳಿದಾಗ ಬಲವಾದ ಸಮುದ್ರದ ಅಲೆಗಳಿಗೆ ಸಿಲುಕಿ ಅವರು ನಾಪತ್ತೆಯಗಿದ್ದರು ಎಂದು ತಿಳಿದು ಬಂದಿದೆ.
ಸ್ಥಳೀಯರು ನಡೆಸಿದ ವ್ಯಾಪಕ ಹುಡುಕಾಟದಿಂದ ಇಬ್ಬರ ಶವಗಳನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ .ಸಮುದ್ರದಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮಂಕಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

