Monday, July 15, 2024
Homeರಾಜ್ಯಭವಾನಿ ರೇವಣ್ಣಗೆ ಕೊನೆಗೂ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

ಭವಾನಿ ರೇವಣ್ಣಗೆ ಕೊನೆಗೂ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

ಬೆಂಗಳೂರು: ಕೆ.ಆರ್.‌ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣರ ಪತ್ನಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣರ ತಾಯಿ ಭವಾನಿ ರೇವಣ್ಣಗೆ ಕೊನೆಗೂ ಮಧ್ಯಂತರ ಜಾಮೀನು ಸಿಕ್ಕಿದೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚಿಸಿದೆ.
ಕೋರ್ಟ್‌ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಕೋರ್ಟ್‌ ಆದೇಶಿಸಿದೆ. ಭವಾನಿ ಅವರನ್ನು ಎಸ್‌ಐಟಿ ಬಂಧಿಸಬಾರದು. ಕೆ.ಆರ್.‌ ನಗರ ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಭವಾನಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ವಾರೆಂಟ್‌ ಜಾರಿಯಾಗಿತ್ತು. ಈ ಆದೇಶ ಅಮಾನತಿನಲ್ಲಿಡಲಾಗಿದೆ ಎಂದು ಹೈಕೋರ್ಟ್‌, ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿತು.

RELATED ARTICLES
- Advertisment -
Google search engine

Most Popular