
ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕಿ ಭವಿತಾ ಡಿ’ಸೋಜಾ ಅವರನ್ನು ಸೊಸೈಟಿಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರು ಸೊಸೈಟಿಯ ಆಡಳಿತ ಮಂಡಳಿ ಸಭೆಯ ಸಂದರ್ಭದಲ್ಲಿ ಭವಿತಾ ಡಿ’ಸೋಜಾ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಅವರು, ಭವಿತಾ ಅವರ ಸಾಧನೆ ಇತರ ಮಹಿಳೆಯರಿಗೂ ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಪ್ರೇರಣೆಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷ ಸಿರಿಲ್ ಡಿ’ಸೋಜಾ, ನಿರ್ದೇಶಕರಾದ ಜೇಮ್ಸ್ ಮಾಡ್ತಾ, ರಾಜೇಶ್, ಭಾಸ್ಕರ್ ರಾವ್, ಶೇಖರ್, ವಿದ್ಯಾ ತೋರಸ್, ಅನಿಲ್ ಹಾಗೂ ಸೊಸೈಟಿಯ ಕಾರ್ಯದರ್ಶಿ ನಿಶಿತಾ ಉಪಸ್ಥಿತರಿದ್ದು, ಭವಿತಾ ಡಿ’ಸೋಜಾ ಅವರಿಗೆ ಅಭಿನಂದನೆ ಸಲ್ಲಿಸಿದರು.
