Thursday, September 12, 2024
Homeಅಪರಾಧ"ಬಿಗ್ ಬಾಸ್ ಫೇಮಸ್ ಪರಿಚಿತ ನಟಿ ಸೋನು ಶ್ರೀನಿವಾಸ್ ಗೌಡರನ್ನು ಅರೆಸ್ಟ್ ಮಾಡಲಾಗಿದೆ..!"

“ಬಿಗ್ ಬಾಸ್ ಫೇಮಸ್ ಪರಿಚಿತ ನಟಿ ಸೋನು ಶ್ರೀನಿವಾಸ್ ಗೌಡರನ್ನು ಅರೆಸ್ಟ್ ಮಾಡಲಾಗಿದೆ..!”

‘ಬಿಗ್ ಬಾಸ್ ಕನ್ನಡ ಒಟಿಟಿ’ ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಈ ವಿಚಾರ ಸೆನ್ಸೇಷನ್ ಸೃಷ್ಟಿ ಮಾಡಿದೆ. ಹಾಗಾದರೆ ಅವರು ಬಂಧನಕ್ಕೆ ಒಳಗಾಗೋಕೆ ಕಾರಣ ಏನು? ಅದಕ್ಕೆ ಉತ್ತರ ಕೇಳಿದ್ರೆ ನಿಮಗೆ ಶಾಕ್ ಆಗೋದು ಗ್ಯಾರಂಟಿ. ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಮಗುವಿನ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

‘ಮೂರು ತಿಂಗಳಿಂದ ಪಾಸಿಟಿವ್ ಆಗಿ ಎಲ್ಲರೂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಹುಶಃ ಇವಳನ್ನು ದತ್ತು ತೆಗೆದುಕೊಂಡಿದ್ದಕ್ಕೋ ಏನೋ’ ಎಂದು ಸೋನು ಶ್ರೀನಿವಾಸ್ ಗೌಡ ಯೂಟ್ಯೂಬ್ ವಿಡಿಯೋದಲ್ಲಿ ಹೇಳಿದ್ದರು. ‘ನಾನು ಅಪಾರ್ಟ್​ಮೆಂಟ್ ಕೆಳಗೆ ನಾಯಿಗೆ ಬಿಸ್ಕಿಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಶಾಪಿಂಗ್ ಹೋದೆವು. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ’ ಎಂದು ಹೇಳಿಕೊಂಡಿದ್ದರು ಸೋನು ಶ್ರೀನಿವಾಸ್ ಗೌಡ.

‘ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೂ ಮೊದಲು ‘ಬಿಗ್ ಬಾಸ್ ಒಟಿಟಿ’ ನಡೆದಿತ್ತು.

RELATED ARTICLES
- Advertisment -
Google search engine

Most Popular