ಕೋಲಾರ, ಮೇ.16: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಪರೇಷನ್ ವೇಳೆ ವೈದ್ಯರು ಭಾರೀ ಎಡವಟ್ಟು ಮಾಡಿದ್ದಾರೆ. ಹೆರಿಗೆಗೆ ಬಂದಿದ್ದ ಮಹಿಳೆಗೆ ಹೆರಿಗೆ ವೇಳೆ ಶಸ್ತ್ರ ಚಿಕಿತ್ಸೆ ಮಾಡಿದ್ದು ವೈದ್ಯರು ಹೊಟ್ಟೆಯಲ್ಲಿ 3 ಅಡಿ ಉದ್ದದ ಬಟ್ಟೆ ಬಿಟ್ಟಿದ್ದಾರೆ. ಮೇ 5 ರಂದು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ಜಿಲ್ಲಾ ಆಸ್ಪತ್ರೆ ವೈದ್ಯೆ ನಾಗವೇಣಿ ಅವರಿಂದ ಈ ಎಡವಟ್ಟು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ರಾಮಸಾಗರ ನಿವಾಸಿ ಚಂದ್ರಿಕಾಗೆ ಆರೋಗ್ಯ ಸಮಸ್ಯೆ ಎದುರಾದಾಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ವೇಳೆ ಸರ್ಕಾರಿ ಆಸ್ಪತ್ರೆ ವೈದ್ಯರ ಯಡವಟ್ಟು ಬಯಲಾಗಿದೆ. ಪತಿ ರಾಜೇಶ್ ರಿಂದ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ವಿಜಯ್ ಜುಮಾರ್ ಗೆ ದೂರು ಸಲ್ಲಿಸಿದ್ದಾರೆ. ವೈದ್ಯರ ಬೇಜವ್ದಾರಿತನದ ವಿರುದ್ದ ಮಹಿಳೆ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ.