ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಪ್ರಕರಣವನ್ನು ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶಿಸಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಆ.12 ರಂದು ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಿದ್ದಿದ್ದು ಸರ್ಕಾರದ ನಿರ್ಧಾರದ ವಿರುದ್ಧ ಸಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.