Thursday, July 25, 2024
Homeರಾಜ್ಯಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಪ್ರೀತಂ ಗೌಡಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಪ್ರೀತಂ ಗೌಡಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸ್ಥಾನದಲ್ಲಿರುವ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಪ್ರೀತಂ ಗೌಡರನ್ನು ಬಂಧಿಸದಂತೆ ಕೋರ್ಟ್‌ ಆದೇಶ ನೀಡಿದ್ದು, ಆದರೆ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಡಿಯೊ ಹಂಚಿಕೆಗೆ ಸಂಬಂಧಿಸಿ ಪ್ರೀತಂ ಗೌಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರೀತಂ ಗೌಡರ ಇಬ್ಬರು ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಹೀಗಾಗಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು.

RELATED ARTICLES
- Advertisment -
Google search engine

Most Popular