ಬೆಂಗಳೂರು: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್ ಎದುರಾಗಿದೆ. ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಖೆ ಎಸ್ಮಾ (ESMA) ಜಾರಿ ಮಾಡಿದೆ. ಮುಷ್ಕರ ನಡೆಸದಂತೆ ನೌಕರರಿಗೆ ತಾಕೀತು ಮಾಡಲಾಗಿದೆ. ಆ.5 ರಂದು ಬಸ್ ನಿಲ್ಲಿಸಿ ಪ್ರತಿಭಟಿಸಲು ಸಾರಿಗೆ ಸಂಘಟನೆಗಳು ಮುಂದಾಗಿದ್ದವು.
ಜನಸಾಮಾನ್ಯರಿಗೆ ಸಾರಿಗೆ ಸೇವೆ ಓದಗಿಸೋದು ಅಗತ್ಯ ಸೇವೆ. ಈ ಹಿನ್ನೆಲೆ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಎಸ್ಮಾ ಜಾರಿ ಮಾಡಲಾಗಿದೆ . ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ.

