Monday, January 13, 2025
Homeಉಡುಪಿಹೆದ್ದಾರಿಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೆದ್ದಾರಿಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಕೋಟ ಮಣೂರು ನಿವಾಸಿ 22ರ ಹರೆಯದ ವಿಕಾಸ್ ಆಚಾರ್ಯ ಮೃತಪಟ್ಟ ಯುವಕ. ಸೋಮವಾರ ರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಾಸ್ತಾನದಿಂದ ಕೋಟ ಮಣೂರು ಕಡೆಗೆ ಬರುತ್ತಿದ್ದ ವೇಳೆ ಗುಜಿರಿ ಅಂಗಡಿ ಬಳಿ ಬೈಕ್ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ವಿಕಾಸ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular