ಕೋಲಾರ: ವೇಗವಾಗಿ ಬಂದು ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ(death) ಘಟನೆ ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮುಳಬಾಗಿಲು ತಾಲೂಕಿನ ಅನಂತಪುರ ಗ್ರಾಮದ ರಂಜಿತ್ ಮೃತ ಯುವಕ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಹಿನ್ನೆಲೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.