ಪಾಲಡ್ಕ ವರ್ಣಬೆಟ್ಟುವಿನಲ್ಲಿ ಬೈಕ್ ಡಿಕ್ಕಿ : ರಸ್ತೆ ದಾಟುತ್ತಿದ್ದ ಮಹಿಳೆ ದಾರುಣ ಸಾವು..!

0
10

ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟು ಮಾಗಂದಡಿಯಲ್ಲಿ ಶುಕ್ರವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಪಾಲಡ್ಕ ಗ್ರಾಮದ ತಾಳಿದಡಿ ನಿವಾಸಿ ಸುಮಿತ್ರಾ ಮೃತಪಟ್ಟವರು. ಕೇಪ್ಲಾಜೆಯ ಸುಪ್ರೇಶ್ ಎಂಬವರು ತಮ್ಮ ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾಗಂದಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ಸುಮಿತ್ರಾ ಅವರಿಗೆ ಬೈಕ್ ಡಿಕ್ಕಿಯಾಗಿದೆ.

ಅಪಘಾತದ ತೀವ್ರತೆಗೆ ಸುಮಿತ್ರಾ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸುಮಿತ್ರಾ ಮೃತಪಟ್ಟಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here