ಬಿಳಿನೆಲೆ ಪಿಡಿಒ ದೂರು ಪ್ರಕರಣ: ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

0
12

​ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀಮತಿ ಚಂದ್ರಾವತಿ ರವರು, ದೂರು ದಾಖಲಿಸಿ ಸರ್ಕಾರಿ ಕರ್ತವ್ಯಕ್ಕೆ ನಿರಂತರವಾಗಿ ಅಡ್ಡಿಪಡಿಸಿ, ಮಾನಸಿಕ ಹಿಂಸೆ ನೀಡಿ, ವಾಟ್ಸಾಪ್ ಮೂಲಕ ಬೆದರಿಕೆ ಹಾಕಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ಪ್ರಸಾದ್ ಕೆ.ಜಿ., ಜೂಲಿಯನ್ ವಿ. ಮತ್ತು ಸಜಿತ್ ಕುಮಾರ್ ಎಸ್. ಅವರ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

​ ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರಾದ ಪ್ರಸಾದ್ ಕೆ.ಜಿ. ಹಾಗೂ ಇತರರು ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿದ್ದು, ಮಾನ್ಯ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆದು, ಪುತ್ತೂರಿನ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಂದೆ ಬಾಕಿ ಇರುವ ಈ ಪ್ರಕರಣದ ಮುಂದಿನ ತನಿಖೆಗೆ ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿರುತ್ತದೆ