ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

0
11

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ್ಲ, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ದಿನಾಂಕ 7-9-2025 ನೇ ಆದಿತ್ಯವಾರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಜರಗಲಿರುವುದು.

ಶ್ರೀ ಶಾರದಾಂಬ ಭಜನಾ ಮಂದಿರ ಶೃಂಗಗಿರಿ ಗುಂಡಿ ಮಜಲು ಇವರಿಂದ ಭಜನಾ ಸಂಕೀರ್ತನ ಕಾರ್ಯಕ್ರಮ, ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಗುರು ಪೂಜೆ ನಂತರ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಅಧ್ಯಕ್ಷರಾದ ಪ್ರೊಫೆಸರ್ ತುಕಾರಾಮ ಪೂಜಾರಿ ಇವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೆಪುಳಕೋಡಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here