ಕರ್ನಾಟಕಕ್ಕೂ ಕಾಲಿಟ್ಟ ಹಕ್ಕಿ ಜ್ವರ..!

0
20

ಬೆಂಗಳೂರು : ದೇಶದ ವಿವಿಧ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಮಾರಕ ‘ಹಕ್ಕಿ ಜ್ವರ’ (H5N1) ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರು ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದ್ದು, ಪಶುಸಂಗೋಪನಾ ಇಲಾಖೆ ತೀವ್ರ ಹೈ ಅಲರ್ಟ್ ಘೋಷಿಸಿದೆ.

ತಪಾಸಣೆ ವೇಳೆ ಕೋಳಿಗಳಲ್ಲಿ ವೈರಸ್ ಇರುವುದು ದೃಢಪಟ್ಟಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಫಾರಂನಲ್ಲಿ ಹಕ್ಕಿಗಳು ಸರಣಿಯಾಗಿ ಸಾವನ್ನಪ್ಪುತ್ತಿದ್ದವು. ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ‘H5N1’ ಇರುವುದು ದೃಢಪಟ್ಟಿದೆ.ಈ ಜಾಗದಿಂದಲೇ ರಾಜ್ಯದ ವಿವಿಧ ಕಡೆ ಕೋಳಿಗಳನ್ನು ಸರಬರಾಜು ಮಾಡಲಾಗಿತ್ತು ಎಂಬ ವಿಚಾರ ಕೂಡ ಹೊರಬಿದ್ದಿದೆ.

ಸೋಂಕು ಹರಡದಂತೆ ತಡೆಯಲು ಫಾರಂನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಕೋಳಿಗಳನ್ನು ನಾಶಪಡಿಸಲು (Culling) ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಹಕ್ಕಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಬಳಸುವಾಗ ಜಾಗರೂಕರಾಗಿರಲು ಮತ್ತು ಅಸಹಜವಾಗಿ ಹಕ್ಕಿಗಳು ಸಾವನ್ನಪ್ಪುತ್ತಿರುವುದು ಕಂಡುಬಂದರೆ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದೆ.

ಹೆಸರಘಟ್ಟದ ಸರ್ಕಾರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಅಧಿಕಾರಿಗಳು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲದಿದ್ದರೂ ಜಾಗರೂಕರಾಗಿರಲು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here